ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಇಂಗ್ಲೆಂಡ್ನ ಡೇವಿಡ್ ವಿಲ್ಲಿ
ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಇಂಗ್ಲೆಂಡ್ ತಂಡಕ್ಕೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಇಂಗ್ಲೆಂಡ್ ತಂಡದ ಸ್ಟಾರ್ ಆಲ್ರೌಂಡರ್ ಡೇವಿಡ್ ವಿಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಲ್ಲಿ ಅವರು, “ಇದು ಅತ್ಯಂತ ವಿಷಾದದಿಂದ ಕೂಡಿದೆ ಎಂದು ನಾನು ಭಾವಿಸುತ್ತೇನೆ. ವಿಶ್ವಕಪ್ನ ಕೊನೆಯಲ್ಲಿ ನಾನು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದುವ ಸಮಯ ಬಂದಿದೆ. ವಿಶ್ವಕಪ್ ಸಮಯದಲ್ಲಿ ನಮ್ಮ ಪ್ರದರ್ಶನಕ್ಕೂ ನನ್ನ ನಿರ್ಧಾರಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.