Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಕ್ರಮ ಹಣ ವರ್ಗಾವಣೆ ಪ್ರಕರಣ – ಬಿಹಾರದ ಜೆಡಿಯು ನಾಯಕ ಅರೆಸ್ಟ್

ಬಿಹಾರ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಯು ಪಕ್ಷದ ನಾಯಕ ರಾಧಾ ಚರಣ್ ಶಾ ಅವರನ್ನು ಜಾರಿ ನಿರ್ದೇಶನಾಲಯ ಬಿಹಾರದ ಭೋಜ್‌ಪುರ ಜಿಲ್ಲೆಯ ಅರಾದಲ್ಲಿರುವ ಅವರ ನಿವಾಸದಲ್ಲಿ ಬಂಧಿಸಿದೆ.

ರಾಧಾ ಚರಣ್ ಶಾ ಅವರ ನಿವಾಸಕ್ಕೆ ದಾಳಿ ಮಾಡಿದ ಕೇಂದ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮನೆಯಲ್ಲಿ ಶೋಧ ಕಾರ್ಯ ನಡೆಸಿ ಬಳಿಕ ದಾಖಲೆಗಳ ಆಧಾರದ ಮೇಲೆ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡುದುಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ಶಾ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.