ಅತ್ತಿಬೆಲೆ ದುರಂತ – ಪಟಾಕಿ ತರಲು ಹೋಗಿದ್ದ ಯುವಕ ಸಾವು..!
ಆನೇಕಲ್ : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಸಾವನಪ್ಪಿದವರ ಸಂಖ್ಯೆ ಇದೀಗ 16ಕ್ಕೇ ಏರಿಕೆಯಾಗಿದೆ. ಪಟಾಕಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಎಂಬುವರು ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ವೆಂಕಟೇಶ್ ಸ್ನೇಹಿತನೊಂದಿಗೆ ಪಟಾಕಿ ಖರೀದಿಗೆ ಹೋಗಿದ್ದ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿತ್ತು. ದುರಂತದಲ್ಲಿ ಅವರ ಸ್ನೇಹಿತ ಪಾರಾಗಿದ್ದು, ವೆಂಕಟೇಶ್ ಗೋದಾಮಿನ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಬೆನ್ನು, ತಲೆ, ಕೈ ಕಾಲುಗಳುಗಳಿಗೆ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿದ್ದವು.
ಮೃತ ವೆಂಕಟೇಶ್ (25) ಬೆಂಗಳೂರು ನಗರ ಜಿಲ್ಲೆಯ ಗಾರೆ ಭಾವಿಪಾಳ್ಯದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದ ಅವರು ಪ್ರವೃತ್ತಿಯಲ್ಲಿ ಬಾಡಿ ಬಿಲ್ಡರ್ ಆಗಿದ್ದರು. ಪರಿಚಯದವರ ಕಾರ್ಯಕ್ರಮಕ್ಕೆ ಪಟಾಕಿ ತರಲು ಅತ್ತಿಬೆಲೆಗೆ ಹೋಗಿದ್ದರು. ದುರಂತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಯುವಕ ತಮಿಳುನಾಡಿನ ದಿನೇಶ್ ಬುಧವಾರ ಮೃತಪಟ್ಟಿದ್ದರು