Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಅನಿಷ್ಠ ಸರ್ಕಾರದ ವಿರುದ್ದ ಹೋರಾಟಕ್ಕೆ ಮೈತ್ರಿ ಅನಿವಾರ್ಯ’: ಬಸವರಾಜ ಬೊಮ್ಮಾಯಿ

ಬೆಂಗಳೂರು: ಈ ಅನಿಷ್ಟ ಸರ್ಕಾರದ ವಿರುದ್ಧ ಹೋರಾಟ ಅವಶ್ಯಕತೆ ಇದೆ. ಹಾಗಾಗಿ ಜೆಡಿಎಸ್ ಜೊತೆ ಮೈತ್ರಿ ಅನಿವಾರ್ಯ ಎಂದು ಮಾಜಿ ಮುಖ್ಯಮಮತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಟೀಕೆ ಎರಡೂ ಪಕ್ಷಗಳು ಅಸಹಾಯಕವಾಗಿವೆ ಎಂದು ಕಾಂಗ್ರೆಸ್ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ಐಎನ್ ಡಿಐಎ ಒಕ್ಕೂಟ ಒಗ್ಗಟ್ಟಾಗಿದ್ದಾರೆ. ಒಬ್ಬರಿಗೊಬ್ಬರು ಆಗದ ಮಮತಾ ಬ್ಯಾನರ್ಜಿ, ಸಿಪಿಐ, ಸಿಪಿಎಂ, ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಎಲ್ಲರೂ ಒಟ್ಟಾಗಿದ್ದಾರೆ. ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿವೆ, ಹಾಗಾದರೆ ಅವು ಅಸಹಾಯಕರಾ? ರಾಜಕಾರಣದ ಇತಿಹಾಸದಲ್ಲಿ ಅನೇಕ ಬದಲಾವಣೆ ಆಗಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅಡ್ವಾಣಿ ಅವರನ್ನು ಭೇಟಿ ಆಗಿದ್ದರು ಎಂಬ ಬಿ.ಕೆ. ಹರಿಪ್ರಸಾದ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಸಿದ್ದರಾಮಯ್ಯ ನವರೇ ಉತ್ತರ ನೀಡಿದ್ದಾರೆ. ನಾಯಕರ ಭೇಟಿ ಮಾಡಿದರೆ ಸಿದ್ಧಾಂತ ಬದಲಾಗುವುದಿ ಹೇಳಿದ್ದಾರೆ. ಅದರ ಅರ್ಥ ಏನು ಎಂದು ಪ್ರಶ್ನಿಸಿದರು‌

ಇದೇ ವೇಳೆ, ಇಂದಿನಿಂದ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಅಂತ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಸರ್ಕಾರ ತನ್ನ ಮಾತಿಗೆಎಷ್ಟು ಗಟ್ಟಿಯಾಗಿ ನಿಲ್ಲುತ್ತಾರೆ ಎಂದು ನೋಡೊಣ ಎಂದರು.

ಸಚಿವ ಡಿ. ಸುಧಾಕರ್ ಮೇಲೆ ವಿರುದ್ಧ ಎಫ್ ಐಆರ್ ಆಗಿದ್ದುಈ ಬಗ್ಗೆ ತನಿಖೆ ಆಗಬೇಕು ಎಂದರು.