ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಚಿಂತನೆ.!
ಗದಗ: ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಸಕಾರಾತ್ಮಕ ಚಿಂತನೆ ನಡೆಸಿದ್ದು, ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದಲ್ಲಿ ಭಾನುವಾರ ನಡೆದ ಪದವಿ ಪೂರ್ವ ನೌಕರರ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. 2015ರಿಂದ 2023ರವರೆಗೆ ರಾಜ್ಯದ ವಿವಿಧ ಅನುದಾನಿತ ಶಿಕ್ಷಣ ಸಂಸ್ಥೆಗಳಿಂದ ನಿವೃತ್ತಿಯಾಗಿರುವ ಎಂಟು ಸಾವಿರ ಖಾಲಿ ಹುದ್ದೆಗಳ ಭರ್ತಿ ಆಗಬೇಕಿದೆ. ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಲಾಗಿದ್ದು, ಕಡೆಪಕ್ಷ 2020ರವರೆಗೆ ನಿವೃತ್ತಿ ಆಗಿರುವ ಹುದ್ದೆಗಳ ಭರ್ತಿಗೆ ಅನುಮತಿ ಪಡೆಯುವ ವಿಶ್ವಾಸವಿದೆ ಎಂದರು.