ಅನ್ನಭಾಗ್ಯ ಯೋಜನೆ: ನಾಳೆ ಸಂಜೆ 5 ಗಂಟೆಗೆ ಅಕ್ಕಿ ಹಣ ಜಮಾಗೆ ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ
ಬೆಂಗಳೂರು: ಅನ್ನಭಾಗ್ಯ ಯೋಜನೆಯ ( Anna Bhagya Scheme ) ಅಡಿಯಲ್ಲಿ ಐದು ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಘೋಷಣೆ ಮಾಡಿದ್ದರು. ಅದರಂತೆ ನಾಳೆ ಸಂಜೆ 5 ಗಂಟೆಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ಸಿಎಂ ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ಇಂದು ಮುಖ್ಯಮಂತ್ರಿ ಕಾರ್ಯಕಲಾಪಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಜುಲೈ.10ರ ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ವಿಧಾನಸಭೆಯ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳಿಂದ ಸಂಕ್ಷಿಪ್ತ ವಿವರಣೆಯನ್ನು ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಪಡೆಯಲಿದ್ದಾರೆ.
ಈ ನಂತ್ರ ಬೆಳಿಗ್ಗೆ 11ಕ್ಕೆ ಆರಂಭಗೊಳ್ಳುವಂತ ವಿಧಾನಸಭೆ ಹಾಗೂ ಪರಿಷತ್ತಿನ ಕಾರ್ಯಕಲಾಪದಲ್ಲಿ ಭಾಗವಹಿಸಲಿದ್ದಾರೆ ಎಂಬುದಾಗಿ ತಿಳಿಸಲಾಗಿದೆ.
ಬೆಳ್ತಂಗಡಿ: ಪಿಕಪ್ ವಾಹನ ಸ್ಕೂಟರ್ ಗೆ ಡಿಕ್ಕಿ-ಓರ್ವ ಸಾವು, ಮಹಿಳೆ ಗಂಭೀರ
ಇನ್ನೂ ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವಂತ ಅನ್ನಭಾಗ್ಯಕ್ಕೆ 10 ವರ್ಷದ ಹಿನ್ನಲೆಯಲ್ಲಿ ಲೋಡಿಂಗ್ ಕಾರ್ಮಿಕರ ದಶಮಾನೋತ್ಸವ ಹಾಗೂ ಶ್ರಮಿಕರ ಹಕ್ಕೊತ್ತಾಯ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಳಿಕ ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನಗದು ನೀಡುವ ಕಾರ್ಯಕ್ರಮಕ್ಕೆ ಚಾಲನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿದ ಬಳಿಕ, ಪಡಿತರದಾರರ ಖಾತೆಗೆ ಪ್ರತಿ ಕುಟುಂಬದ ಫಲಾನುಭವಿಗಳ ಖಾತೆಗೆ ರೂ.170 ಹಣ ಡಿಬಿಟಿ ಮೂಲಕ ಜಮಾ ಆಗಲಿದೆ.