Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಭಿವೃದ್ಧಿಗಾಗಿ ಬಹುಮತ ಕೊಡಿ: ನರೇಂದ್ರ ಮೋದಿ

 

ದೆಹಲಿ: ದೇಶದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬಹುಮತದಿಂದ ಅಧಿಕಾರಕ್ಕೆ ಬರಬೇಕು. ಆಗ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ಲೋಕಸಭೆ, ರಾಜ್ಯಸಭೆಯಲ್ಲಿ ಬಹುಮತ ಪಡೆದ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ವಿಶೇಷ ಸಮಾರಂಭ ಏರ್ಪಡಿಸಿತ್ತು.

ಈ ಸಭೆಯಲ್ಲಿ ಮಾತನಾಡಿದ ಮೋದಿ, ಕಿಚಡಿ ಸರ್ಕಾರಗಳಿಂದ ದೇಶಕ್ಕೆ ಯಾವುದೇ ಲಾಭವಿಲ್ಲ. ಹೀಗಾಗಿ ಬಹುಮತ ಸರ್ಕಾರವನ್ನು ಆಯ್ಕೆ ಮಾಡಿ ಎಂದು ಜನತೆಗೆ ಕರೆ ಕೊಟ್ಟರು.