ಅಮೆರಿಕದ ಅಧ್ಯಕ್ಷೀಯ ಆಕಾಂಕ್ಷಿ ವಿವೇಕ್ ರಾಮಸ್ವಾಮಿಗೆ ಕೊಲೆ ಬೆದರಿಕೆ: ಆರೋಪಿ ಬಂಧನ
ಅಮೆರಿಕ : ಭಾರತ ಮೂಲದ ರಿಪಬ್ಲಿಕನ್ ಪಕ್ಷದ ಅಮೆರಿಕದ ಅಧ್ಯಕ್ಷೀಯ ಆಕಾಂಕ್ಷಿ ವಿವೇಕ್ ರಾಮಸ್ವಾಮಿ ಅವರಿಗೆ ಹತ್ಯೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಅಮೆರಿಕ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು 30 ವರ್ಷದಟೈಲರ್ ಆಂಡರ್ಸನ್ ಎಂದು ಗುರುತಿಸಲಾಗಿದೆ. ಈತ ವಿವೇಕ್ ರಾಮಸ್ವಾಮಿ ಮತ್ತು ಅವರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸುವವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ.
ನ್ಯೂ ಹ್ಯಾಂಪ್ಶೈರ್ನ ಪೋರ್ಟ್ಸ್ಮೌತ್ನಲ್ಲಿ ನಡೆದ ರಾಜಕೀಯ ಕಾರ್ಯಕ್ರಮದ ಕುರಿತು ರಾಮಸ್ವಾಮಿಯವರ ಪ್ರಚಾರದ ಬಳಿಕ ಈ ಬೆದರಿಕೆ ಬಂದಿತ್ತು.
ರಾಮಸ್ವಾಮಿ ಅವರು “ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದ್ದಕ್ಕಾಗಿ ಕಾನೂನು ಜಾರಿ ಸಂಸ್ಥೆಗೆ ಧನ್ಯವಾದ ಹೇಳಿದ್ದಾರೆ.
್ಈ ಘಟನೆ ಬಗ್ಗೆ ತನಿಖೆಮಾಡಲಾಗುತ್ತಿದೆ ಎಂದು ಅಮೆರಿಕ ಪೊಲೀಸ್ ಅಧಿಕಾರಿಯೊಬ್ಬ ರು ಹೇಳಿದ್ದಾರೆ.