ಅಯೋಧ್ಯೆಯಲ್ಲಿ ವಿರಾಜಮಾನನಾದ ರಾಮಲಲ್ಲಾ: ಪ್ರಾಣಪ್ರತಿಷ್ಠೆ ಸಂಪನ್ನ
ಅಯೋಧ್ಯೆ: ಸುಮಾರು 5 ಶತಕಗಳ ನಂತರ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ 51 ಇಂಚಿನ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ.
ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದು, ಮೋದಿ ಸೇರಿದಂತೆ 7 ಸಾವಿರ ಗಣ್ಯರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಸುಮಾರು 5 ಶತಕಗಳ ನಂತರ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ಲೋಕಾರ್ಪಣೆಯಾಗಿರುವುದಕ್ಕೆ ದೇಶದಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ.