ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ – ರಾಮಮಂದಿರದತ್ತ ಹರಿದು ಬರುತ್ತಿದೆ ಗಣ್ಯರ ದಂಡು
ಅಯೋಧ್ಯ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಬವಾಗಿದ್ದು, ಅಯೋಧ್ಯೆಯೂ ಮಧುವನಗಿತ್ತಿಯಂತೆ ಸಿಂಗಾಗೊಂಡಿದೆ.
ಇಂದು ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಬೆಳಿಗ್ಗೆಯಿಂದಲೇ ಸಂತರು, ಗಣ್ಯರ ದಂಡೆ ರಾಮಮಂದಿರದತ್ತ ಬರುತ್ತಿದ್ದಾರೆ.
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ 51 ಇಂಚಿನ ಬಾಲರಾಮನ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ನೆರವೇರುವುದರೊಂದಿಗೆ ಮಂದಿರದ ಉದ್ಘಾಟನೆಯೂ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ 7 ಸಾವಿರ ಅತಿಥಿಗಳು ಈ ದಿವ್ಯ ಘಳಿಗೆಗೆ ಪ್ರತ್ಯಕ್ಷ ಸಾಕ್ಷಿಯಾಗಲಿದ್ದಾರೆ.