ಅಯೋಧ್ಯೆಯಲ್ಲಿ ಹೆಚ್ಚಿದ ಭದ್ರತೆ – ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ
ಅಯೋಧ್ಯೆ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಭಯೋತ್ಪಾದನಾ ನಿಗ್ರಹ ದಳವು ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದೆ.
ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಶಂಕಿತ ಜನರನ್ನು ವಶಕ್ಕೆ ತೆಗೆದುಕೊಂಡಿದ್ದು, ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಇನ್ನು ಇದುವರೆಗೂ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಬಹಿರಂಗವಾಗಿಲ್ಲ. ಉತ್ತರ ಪ್ರದೇಶ ಸರ್ಕಾರವು ಡ್ರೋನ್ಗಳ ಮೂಲಕ ಕಣ್ಗಾವಲು ಹೆಚ್ಚಿಸಿದೆ ಎಂದರು.
ಜನವರಿ 14 ರಿಂದ ಜನವರಿ 22 ರವರೆಗೆ ಅಯೋಧ್ಯೆಯಲ್ಲಿ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ.