ಅಯೋಧ್ಯೆ ರಾಮಮಂದಿರ ಉದ್ಘಾಟನೆ : ಜ. 22 ರಂದು ಮಾಂಸ, ಮೀನು ನಿಷೇಧಿಸಿದ ಯೋಗಿ ಸರ್ಕಾರ
ಲಕ್ನೋ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನು ಕೆಲವೇ ದಿನಗಳಿದ್ದು ಉತ್ತರ ಪ್ರದೇಶದಲ್ಲಿ ಜನವರಿ 22 ರಂದು ಮಾಂಸ, ಮೀನು ಮಾರಾಟವನ್ನು ನಿಷೇಧಿಸಿದೆ.
ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಸರ್ಕಾರವು ಜನವರಿ 22 ರಂದು ರಾಮ್ ಲಲ್ಲಾ ಪ್ರತಿಷ್ಠಾಪನೆಯ ದಿನ ಉತ್ತರ ಪ್ರದೇಶದ ಎಲ್ಲಾ ಮಾಂಸ, ಮೀನು ಹಾಗೂ ಮಧ್ಯ ಮಾರಾಟವನ್ನೂ ನಿಷೇಧಿಸಿದೆ.
ಜ 22 ರಂದು ರಾಮ ಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದ್ದು. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ರಾಮ್ ಲಲ್ಲಾ ಪ್ರತಿಷ್ಠಾಪನೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ 7,000 ಕ್ಕೂ ಹೆಚ್ಚು ಜನರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ.