ಅಲಹಾಬಾದ್ ವಿವಿಯ ಹಾಸ್ಟೆಲ್ ನಲ್ಲಿ ಬಾಂಬ್ ಸ್ಪೋಟ: ಓರ್ವ ವಿದ್ಯಾರ್ಥಿ ಗಂಭೀರ
ಅಲಹಾಬಾದ್:ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ಸ್ಫೋಟಗೊಂಡು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿಯಾಗಿರುವ ಪ್ರಭಾತ್ ಯಾದವ್ ಸ್ಪೋಟದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈತ ಬುಧವಾರ ಸಂಜೆ ಹಾಸ್ಟೆಲ್ ನಲ್ಲಿ ಬಾಂಬ್ ತಯಾರಿಯಲ್ಲಿ ತೊಡಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದ್ದು, ಸ್ಫೋಟಕವು ಕೈಯಲ್ಲಿರುವಾಗಲೇ ಸ್ಫೋಟಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಂಬ್ ಸ್ಪೋಟಗೊಂಡ ಕಾರಣದಿಂದ ವಿದ್ಯಾರ್ಥಿ ಪ್ರಭಾತ್ ಯಾದವ್ ನ ಬಲಗೈಗೆ ತೀವ್ರವಾಗಿ ಗಾಯವಾಗಿದ್ದು, ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸಹಾಯಕ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಯಾದವ್ ಮಾಹಿತಿ ನೀಡಿದ್ದಾರೆ
ಬಾಂಬ್ ತಯಾರಿಸುತ್ತಿದ್ದ ಎಂಬುದರ ಕುರಿತು ಈವರೆಗೆ ಮಾಹಿತಿ ಲಭ್ಯವಾಗಿಲ್ಲ.
ವಿದ್ಯಾರ್ಥಿ ಪ್ರಭಾತ್ ಯಾದವ್ ವಿರುದ್ಧ ಶೀಘ್ರದಲ್ಲೇ ಪ್ರಕರಣ ದಾಖಲಿಸಲಾಗುವುದು ಎಂದು ಎಸಿಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.