Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಲ್ಪಸಂಖ್ಯಾತರ ಸಮುದಾಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

 

ದಾವಣಗೆರೆ; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಮತ್ತು ನಗರ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಿದ್ಯಾಭ್ಯಾಸ ಮುಂದುವರೆಸಲು ಪ್ರೋತ್ಸಾಹಧನ ಧನ ನೀಡಲಾಗುತ್ತಿದೆ. ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ಮತ್ತು ಡಿಪಾರ್ಟಮೆಂಟ್ ಆಫ್ ಎಜುಕೇಷನಲ್ ರಿಸರ್ಚ್ ಅಂಟ್ ಟ್ರೈನಿಂಗ್ ಮಾನ್ಯತೆ ಪಡೆದಿರುವ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 30 ರೊಳಗಾಗಿ ಸೇವಾ ಸಿಂಧು ಪೋರ್ಟಲ್ https://Sevasindhu.Karnataka.gov.in      ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಸ. ಸಂ. 8277799990, ಕಚೇರಿ ದೂ. ಸಂ. 08192 250022 ಸಂಪರ್ಕಿಸಲು  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.