Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯ

ಉತ್ತಪ್ರದೇಶ: ದಟ್ಟವಾದ ಮಂಜು ಆವರಿಸಿದ ಪರಿಣಾಮ ಆಗ್ರಾ – ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಬುಧವಾರ ಮುಂಜಾನೆ ಉನ್ನಾವೊ ಬಳಿ ಸರಣಿ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಇಪ್ಪತ್ತನಾಲ್ಕು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ದಟ್ಟದಾದ ಮಂಜಿನಿಂದಾಗಿ ಕಳಪೆ ಗೋಚರತೆಯಿಂದಾಗಿ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಹೆದ್ದಾರಿಯ ವಿಭಾಜಕಕ್ಕೆ ಡಿಕ್ಕಿ ಹೊಡೆದ ಹಿನ್ನಲೆ ಹಿಂದಿನಿಂದ ಬಂದ ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.

ಘಟನೆಯಿಂದ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ ಸುಮಾರು 24ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಪ್ರಾಥಮಿಕ ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ 6 ಮಂದಿಯನ್ನು ಲಕ್ನೋದ ಟ್ರಾಮ ಸೆಂಟರ್‌ಗೆ ಸಾಗಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.