Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ’- ಮೋದಿ

ಬೆಂಗಳೂರು: ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಸಂಭ್ರಮವನ್ನು ಮತ್ತಷ್ಟು  ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.

ಟ್ವಿಟ್ಟರ್‌ ಎಕ್ಸ್‌ ಖಾತೆಯಲ್ಲಿ ಶುಭ ಹಾರೈಸಿರುವ ಮೋದಿ ಅವರು, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸಿದ್ದಾರೆ.