ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ ಅಶೋಕ್ ತನ್ವರ್
ದೆಹಲಿ: ಎಎಪಿಯ ದಲಿತ ಮುಖ ಮತ್ತು ಪ್ರಚಾರ ಸಮಿತಿ ಮುಖ್ಯಸ್ಥ ಅಶೋಕ್ ತನ್ವರ್ “ನೈತಿಕ”ಭಿನ್ನತೆಯ್ನು ಉಲ್ಲೇಖಿಸಿ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.
ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಉದ್ದೇಶಿಸಿ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ತನ್ವರ್ ಅವರು “ಪ್ರಸ್ತುತ ರಾಜಕೀಯ ಸನ್ನಿವೇಶ”ವನ್ನು ದೂಷಿಸಿದ್ದು ,ಕಾಂಗ್ರೆಸ್ ಜೊತೆಗಿನ ಅವರ ಪಕ್ಷದ ಮಾತುಕತೆಗಳನ್ನು ಟೀಕಿಸಿದ್ದಾರೆ.
ಪ್ರಸ್ತುತ ರಾಜಕೀಯ ಸನ್ನಿವೇಶ ಮತ್ತು ಕಾಂಗ್ರೆಸ್ನೊಂದಿಗಿನ ನಿಮ್ಮ ಹೊಂದಾಣಿಕೆಯ ದೃಷ್ಟಿಯಿಂದ, ನನ್ನ ನೈತಿಕತೆಯು ನನ್ನನ್ನು ಮುಂದುವರಿಸಲು ಅನುಮತಿಸುವುದಿಲ್ಲ ಆದ್ದರಿಂದ, ನನ್ನ ರಾಜೀನಾಮೆಯನ್ನು ದಯವಿಟ್ಟು ಸ್ವೀಕರಿಸಿ ಎಂದು ತನ್ವರ್ ಬರೆದಿದ್ದಾರೆ.
ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಅವರು “ಭಾರತ್” ಎಂದು ಉಲ್ಲೇಖಿಸಿದ್ದರಿಂದ ಅವರು ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹರಡಿದೆ.