Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಆರ್‌ಎಸ್‌ಎಸ್‌ ವಿರುದ್ಧ ಸಚಿವ ಪ್ರಿಯಾಂಕ್‌ ಕಿಡಿ

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಆರ್‌ಎಸ್‌ಎಸ್‌ ತತ್ತ್ವದಿಂದ ಯಾರು ಉದ್ಧಾರ ಆಗಿದ್ದಾರೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆಯೂ ಇಲ್ಲ; ದೇಶ ಭಕ್ತಿಯೂ ಇಲ್ಲ. ನಾನೇನೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ಭಯಪಡುವುದಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು ಎಂದಿರುವ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಅಷ್ಟೊಂದು ಆಸಕ್ತಿ ಇದ್ದರೆ ಖಾಸಗಿ ಶಿಕ್ಷಣ ಸಂಸ್ಥೆ ನಡೆಸಲಿ ಎಂದು ವಾಗ್ದಾಳಿ ನಡೆಸಿದ್ದಾರೆ