Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ; ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹೊಸಪೇಟೆ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯಿಂದ 2023-24ನೇ ಸಾಲಿನ ವಿವಿಧ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಭೀಮಪ್ಪ ಕೆ. ಅವರು ತಿಳಿಸಿದ್ದಾರೆ.

ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿದ, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾದ ಅರ್ಹ ಅರ್ಜಿದಾರರಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಯೋಜನೆ ಆಯಕೆಯ ಸಂದರ್ಭದಲ್ಲಿ ಮಹಿಳೆಯರಿಗೆ ಶೆ.33, ವಿಕಲಚೇತನರಿಗೆ ಶೇ.5 ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ.5 ಮೀಸಲಾತಿ ಇರುತ್ತದೆ. ಅರ್ಜಿದಾರರು ಸೆ.18ರ ಒಳಗಾಗಿ https://kacdc.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಹೊಸಪೇಟೆ ತಾಲ್ಲೂಕು ಕಚೇರಿ ಕಟ್ಟಡದ 1ನೇ ಮಹಡಿ, ಕೊಠಡಿ ಸಂಖ್ಯೆ 4ಕ್ಕೆ ಭೇಟಿ ನೀಡಬಹುದು.