Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಆಸ್ಟ್ರೇಲಿಯಾದಲ್ಲಿ ದುಷ್ಕರ್ಮಿಗಳ ಅಟ್ಟಹಾಸ – ಹತ್ತು ಜನರನ್ನು ಇರಿದು ಕೊಂದ ಕಿರಾತಕರು

ಸಿಡ್ನಿ : ಆಸ್ಟ್ರೇಲಿಯಾದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದ್ದು, ಘೋರ ದುರಂತ ಸಂಭವಿಸಿದ್ದು, ಹತ್ತು ಜನರನ್ನು ದುಷ್ಕರ್ಮಿಗಳು ಇರಿದು ಕೊಂದಿದ್ದಾರೆ. ಶಾಪಿಂಗ್ ಮಾಲ್ ಗೆ ನುಗ್ಗಿ ಕಂಡ ಕಂಡವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, 10ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಸುದ್ದಿ ಸಂಸ್ಥೆ ಬಿಎನ್‌ಒ ನ್ಯೂಸ್ ಪ್ರಕಾರ, ಚೂರಿ ಇರಿತದ ಘಟನೆಯಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಸಿಡ್ನಿಯ ವೆಸ್ಟ್ಫೀಲ್ಡ್ ಬೊಂಡಿ ಜಂಕ್ಷನ್ ಶಾಪಿಂಗ್ ಸೆಂಟರ್ನಲ್ಲಿ ಈ ಘಟನೆ ನಡೆದಿದೆ.