ಇಂದಿನಿಂದ ಫೆ.02 ರಿಂದ 04 ರವರೆಗೆ 31ನೇ ಫಲ-ಪುಷ್ಪ ಪ್ರದರ್ಶನ
ಚಿತ್ರದುರ್ಗ : ತೋಟಗಾರಿಕೆ ಇಲಾಖೆ, ಜಿಲ್ಲಾಪಂಚಾಯತ್, ಜಿಲ್ಲಾ ತೋಟಗಾರಿಕೆ ಸಂಘ ಮತ್ತು ಕೃಷಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 31ನೇ ಫಲ-ಪುಷ್ಪ ಪ್ರದರ್ಶನ ಇದೇ ಫೆ.02 ರಿಂದ 04 ರವರೆಗೆ ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯ ತೋಟಗಾರಿಕೆ ಇಲಾಖೆ ಆವರಣದಲ್ಲಿ ಏರ್ಪಡಿಸಲಾಗಿದ್ದು, ಫೆ.02ರಂದು ಸಂಜೆ 6ಕ್ಕೆ ಫಲ-ಪುಷ್ಪ ಪ್ರದರ್ಶನದ ಉದ್ಘಾಟನೆ ಸಮಾರಂಭ ನಡೆಯಲಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಹಾಗೂ ಸಂಸದ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು. ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲ ಇಕ್ಬಾಲ್, ಲಾಲ್‍ಬಾಗ್ ತೋಟಗಾರಿಕೆ ನಿರ್ದೇಶಕ ಡಾ.ಡಿ.ಎಸ್.ರಮೇಶ್, ಅಪರ ನಿರ್ದೇಶಕರಾದ ಡಾ.ಪಿ.ಎಂ.ಸಬರದ, ಕೆ.ಎಂ.ಪರಶಿವಮೂರ್ತಿ, ಕೆ.ಬಿ.ದುಂಡಿ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ಧಮೇರ್ಂಧರ್ ಕುಮಾರ್ ಮೀನಾ ಭಾಗವಹಿಸುವರು.
(ಸಾಂದರ್ಭಿಕ ಚಿತ್ರ)