ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ.!
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಬುಧವಾರ ಇಂದುಬಆರಂಭವಾಗಲಿದ್ದು, ಲೋಕಸಭಾ ಚುನಾವಣೆಗೆ ಮುನ್ನ ಮಧ್ಯಂತರ ಬಜೆಟ್ ಮಂಡಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೆಡಿಆಗಿದೆ.
ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಭಾಷಣ ಮಾಡಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ನಲ್ಲಿ ದೊಡ್ಡ ಘೋಷಣೆಗಳು ಇರುವುದಿಲ್ಲ ಎಂದು ನಿರ್ಮಲಾ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ನೂತನ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದೆ..!