Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

ನವದೆಹಲಿ: ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.

ಮುಂಬರುವ ಹಲವು ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಲವರಿಗೆ ಸಂಪುಟ ಸೇರುವ ಅವಕಾಶ ಸಿಗಲಿದೆ ಎಂಬ ಪ್ರಚಾರದ ಹಿನ್ನಲೆಯಲ್ಲಿ ನಾಳಿನ ಪ್ರಗತಿ ಮೈದಾನದಲ್ಲಿ ನಡೆಯಲಿರುವ ಸಭೆ ಹೆಚ್ಚಿನ ಕುತೂಹಲ ಮೂಡಿಸಿದೆ.

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ತಾಯಿ

ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಆಯಾ ರಾಜ್ಯಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು ಸಂಪುಟದಲ್ಲಿ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. 2024ರ ಲೋಕಸಭೆ ಚುನಾವಣೆಯ ಕಾರ್ಯತಂತ್ರ, ರಾಜ್ಯದಲ್ಲಿ ಸಂಘಟನಾತ್ಮಕ ಬದಲಾವಣೆಗಳ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯೂ ಇದೆ.