Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿದ್ದರಾಮಯ್ಯ..!

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಗುರುವಾರ) ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಹೌದು. ಕಾಂಗ್ರೆಸ್ ಹೈಕಮಾಂಡ್​ ಬುಲಾವ್ ಮೇರೆಗೆ ನಿನ್ನೆ ನವದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಕೇವಲ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಸಿಎಂ ಸಿದ್ದಾರಮಯ್ಯ ಅವರು ಸಹ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.