Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ಬೀದರ್‌ಗೆ ಪ್ರಧಾನಿ ಮೋದಿ ಭೇಟಿ – ಡ್ರೋನ್ ಹಾರಾಟಕ್ಕೆ ನಿಷೇಧ

ಬೀದರ್ : ಬೀದರ್‌ನ ವಾಯುಸೇನೆ ತರಬೇತಿ ಕೇಂದ್ರಕ್ಕೆ ಮಂಗಳವಾರ ಮಧ್ಯಾಹ್ನ 1.50ಕ್ಕೆ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬೀದರ್ ಜಿಲ್ಲಾಡಳಿತ ಡ್ರೋನ್ ಹಾರಾಟ ನಿಷೇಧಿಸಿದೆ. ಮೋದಿ ಭದ್ರತೆಯ ಶಿಷ್ಟಾಚಾರದಂತೆ ಬೀದರ್‌ನ ವಾಯುಸೇನೆ ತರಬೇತಿ ಕೇಂದ್ರ, ಬೀದರ್ ನಗರದ ಸುತ್ತಮುತ್ತಲಿನ 3 ಕಿ. ಮೀ. ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 6 ರಿಂದ ರಾತ್ರಿ 10ರ ತನಕ ಜನರು ಡ್ರೋನ್ ಹಾರಾಟ ನಡೆಸುವುದನ್ನು ನಿರ್ಬಂಧಿಸಲಾಗಿದೆ. ಅಗತ್ಯ ಭದ್ರತಾ ಕ್ರಮಗಳನ್ನು ಬೀದರ್ ಜಿಲ್ಲಾಡಳಿತ ಕೈಗೊಂಡಿದೆ. ಬೀದರ್ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಡ್ರೋನ್ ಹಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.