Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ಮತ್ತು ನಾಳೆ ರಾಜ್ಯದ ಹಲವೆಡೆ ಭಾರೀ ಮಳೆ.!

 

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೆ. 3 ಹಾಗೂ 4ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ

ಇದೇ 3ರಂದು ಬೀದರ್, ಕಲಬುರಗಿ, ಇದೇ 4ರಂದು ಕಲಬುರಗಿ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.

ಬೆಳಗಾವಿ, ಚಾಮರಾಜನಗರ, ಕೋಲಾರ, ರಾಮನಗರ ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಜೋರು ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.