ಇನ್ನೊಂದು ವಾರ ರಾಜ್ಯದಲ್ಲಿ ಈ ಭಾಗಗಳಲ್ಲಿ ಮಳೆ ಆಗಲಿದೆ.!
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 7 ದಿನಗಳ ಕಾಲ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಹಗುರ ಮಳೆಯಾಗಲಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಜಿಟಿಜಿಟಿ ಮಳೆ ಸಾಧ್ಯತೆ ಇದೆ.
ಇನ್ನು ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು, ತುಮಕೂರಲ್ಲಿ ಮಳೆರಾಯನ ದರ್ಶನ ಸಿಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎಂದು ವರದಿ ತಿಳಿಸಿದೆ.