Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಈ ಎರಡು ದಿನ ನಗರಕ್ಕೆ ಶಾಂತಸಾಗರ ನೀರು ಬರಲ್ಲ.!

 

ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಕುಟ್ಟಿಗೆಹಳ್ಳಿ ಪಂಪ್‍ಹೌಸ್‍ನಿಂದ ಚಿತ್ರದುರ್ಗ ನಗರದವರೆಗೆ ಮಾರ್ಗ ಮಧ್ಯದಲ್ಲಿ ಮುಖ್ಯ ಕೊಳವೆ ಮಾರ್ಗದ ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ಇದೇ ಫೆ.12 ರಿಂದ 14ರವರೆಗೆ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡುಯುವ ನೀರನ್ನು ಉಪಯೋಗಿಸಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ. ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.