ಈ ‘ಕೆಲಸ’ ಮಾಡದಿದ್ರೆ ನಿಮಗೆ ಸಿಗಲ್ಲ ‘ಗೃಹಲಕ್ಷ್ಮಿ’ 5 ನೇ ಕಂತಿನ ಹಣ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.
ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇಕೆವೈಸಿ ಮಾಡಿಸಬೇಕು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ ಈಕೆವೈಸಿ ಮಾಡಿಸಬೇಕು. ಈ ಕೆಲಸ ಮಾಡದಿದ್ರೆ ನಿಮಗೆ ಗೃಹಲಕ್ಷ್ಮಿ 5 ನೇ ಕಂತಿನ ಹಣ ಸಿಗುವುದಿಲ್ಲ.
ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
ಯಜಮಾನಿಯರ ಬ್ಯಾಂಕ್ ಖಾತೆಯಲ್ಲಾದ ಹಲವು ತಾಂತ್ರಿಕ ದೋಷಗಳು ಹಾಗೂ ಕೆಲವು ತಾಂತ್ರಿಕ ತೊಂದರೆಗಳಿಂದ ಇನ್ನೂ ಕೆಲವು ಯಜಮಾನಿಯರ ಖಾತೆಗೆ ಹಣ ಬಂದಿಲ್ಲ. ಬ್ಯಾಂಕ್ ಗೆ ಹೋಗಿ ಖಾತೆ ಆಯಕ್ಟಿವ್ ಇದೆಯೋ ಇಲ್ಲವಾ ಪರಿಶೀಲಿಸಿ.