Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಉಚಿತ ಯೋಜನೆ ತಾತ್ಕಾಲಿಕವಾಗಿ ರಾಜಕೀಯ ಲಾಭ ತರಬಹುದು|ಆದರೆ ದೇಶಕ್ಕೆ ಹಾನಿ-ಪ್ರಧಾನಿ ಮೋದಿ

ಸರ್ಕಾರದ ನೀತಿಗಳಲ್ಲಿ ಹಣಕಾಸಿನ ಶಿಸ್ತು ಅತ್ಯವಶ್ಯಕ. ಆರ್ಥಿಕ ಶಿಸ್ತಿನ ತಿಳುವಳಿಕೆ ಹೊಂದಿರಬೇಕು. ಉಚಿತ ಯೋಜನೆ ತಾತ್ಕಾಲಿಕವಾಗಿ ರಾಜಕೀಯಕ್ಕೆ ಲಾಭ ತರಬಹುದು ಆದರೆ ಇದರಿಂದ ದೇಶಕ್ಕೆ ದೊಡ್ಡ ಹಾನಿ ಎಂದು ಪ್ರಧಾನಿ ಮೋದಿ ಯವರು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ನೇರವಾಗಿ ಹಾಗೂ ಎಚ್ಚರಿಕೆ ನೀಡಿದ್ದಾರೆ.

ಜಿ20 ಶೃಂಗಸಭೆ ಹಿನ್ನಲೆಯಲ್ಲಿ ಪಿಟಿಐ ಸುದ್ದಿಸಂಸ್ಥೆಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವಂತ ಅವರು, ಬೇಜವಾಬ್ದಾರಿತದನ ಹಣಕಾಸು ನೀತಿಗಳು ಹಾಗೂ ಜನಪ್ರಿಯ ಕಾರ್ಯಕ್ರಮಗಳು ಅಲ್ಪಾವಧಿಯಲ್ಲಿ ರಾಜಕೀಯ ಲಾಭವನ್ನು ತಂದುಕೊಡಬಲ್ಲದು. ಆದರೇ ಇಂತಹ ಕೊಡುಗೆಗಳಿಂದ ದೀರ್ಘಾವಧಿಯಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಭಾರೀ ಬೆಲೆ ತೆರಬೇಕಾಗುತ್ತದೆ ಎಂಬುದಾಗಿ ಹೇಳಿದರು.

ಜಾಗತಿಕ ಸಾಲದ ಬಿಕ್ಕಟ್ಟಿನ ಕುರಿತು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ವಿತ್ತೀಯ ಶಿಸ್ತಿನ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. ಸಾಲದ ಬಿಕ್ಕಟ್ಟು, ಜಗತ್ತಿಗೆ ಅದರಲ್ಲೂ ವಿಶೇಷವಾಗಿ ಅಭಿವೃದ್ಧಿ ಶೀಲ ದೇಶಗಳಿಗೆ ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಸಾಲದ ಬಿಕ್ಕಟ್ಟಿಗೆ ಸಿಲುಕಿರುವ, ಬಿಕ್ಕಟ್ಟು ಅನುಭವಿಸುತ್ತಿರುವ ದೇಶಗಳು ಆರ್ಥಿಕ ಶಿಸ್ತಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.