ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ; ಅರ್ಜಿ ಆಹ್ವಾನ
![](https://suddimane.com/wp-content/uploads/2023/09/684-11.png)
ಹೊಸಪೇಟೆ: ವಿಜಯನಗರ ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕೆ ವತಿಯಿಂದ ವೃತ್ತಿನಿರತ ಕುಶಲ ಕರ್ಮಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.
ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಭಾಗದವರಿಗೆ ಒಟ್ಟು 287 ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು vijayanagara.nic.in ವೆಬ್ಸೈಟ್ ಮೂಲಕ ಅ.26ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೈಗಾರಿಕಾ ವಿಸ್ತರಣಾಧಿಕಾರಿ, ಹೊಸಪೇಟೆ ಮತ್ತು ಹಗರಿಬೊಮ್ಮನಹಳ್ಳಿ ಮೊ.9035547140, ಹೂವಿನಹಡಗಲಿ ಮತ್ತು ಹರಪನಹಳ್ಳಿ ಮೊ.8496941852, ಕೂಡ್ಲಿಗಿ ಮತ್ತು ಕೊಟ್ಟೂರು ಮೊ.9844200579 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.