ಉತ್ತರ ಪ್ರದೇಶ ಜನತೆಗೆ ಪೊಲೀಸರ ಮೇಲೆ ವಿಶ್ವಾಸ ಹೆಚ್ಚಾಗಿದೆ – ಯೋಗಿ ಆದಿತ್ಯನಾಥ್
ಲಕ್ನೋ: ಉತ್ತರ ಪ್ರದೇಶದ ಜನತೆಗೆ ಇಲ್ಲಿನ ಪೊಲೀಸರ ಮೇಲೆ ನಂಬಿಕೆ ಹೆಚ್ಚಾಗಿದೆ. ಕಾನೂನು ಸುವ್ಯವಸ್ಥೆ ಚಿತ್ರಣವನ್ನು ಪೊಲೀಸರು ಸಂಪೂರ್ಣ ಬದಲಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಈಗ ಉತ್ತರ ಪ್ರದೇಶ ಪೊಲೀಸರ ಸಂಪೂರ್ಣ ಹಿಡಿತದಲ್ಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಕ್ರೀಡೆ ಕೋಟಾದಲ್ಲಿ ಆಯ್ಕೆಯಾದ ಪೊಲೀಸ್ ಕಾನ್ಸ್ಟೇಬಲ್‌ಗಳಿಗೆ ನೇಮಕಾತಿ ಪತ್ರ ನೀಡುವ ಸಮಾರಂಭದಲ್ಲಿ ಮಾತನಾಡಿದ ಅವರು, ಪೊಲೀಸರ ಬಗ್ಗೆ ಗುಣಗಾನ ಮಾಡಿದ್ದಾರೆ. ಆರು ವರ್ಷಗಳ ನಂತರ ಪೊಲೀಸರ ಮೇಲೆ ಜನವಿಶ್ವಾಸ ಮರುಸ್ಥಾಪನೆಗೆ ಪೊಲಲೀಸರು ಶ್ರಮದಿಂದ ದುಡಿದಿದ್ದಾರೆ. ಈಗ ಉತ್ತರ ಪ್ರದೇಶದಲ್ಲಿ ಪ್ರತಿ ಹಬ್ಬಗಳನ್ನೂ ಶಾಂತಿಯುತವಾಗಿ ಆಚರಿಸಲಾಗುತ್ತಿದೆ. ಜನರು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಇದರಿಂದ ಅಪರಾಧ ಚಟುವಟಿಕೆ ಕಡಿಮೆಯಾಗಿ ಉತ್ತರ ಪ್ರದೇಶದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಆಸಕ್ತಿ ತೋರುತ್ತಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಇದೇ ವೇಳೆ ಹೇಳಿದರು.