Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!

 

ಹೊಸಪೇಟೆ :2023-24ನೇ ಸಾಲಿನ ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಆಸಕ್ತರಿಗೆ 10 ದಿನಗಳ ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಂಟಿ ನಿರ್ದೇಶಕ ಜಿ.ಯು.ಹುಡೇದ ಅವರು ತಿಳಿಸಿದ್ದಾರೆ.

ಎಲ್ಲಾ ವರ್ಗದ ಮಹಿಳೆಯರು, ಪರಿಶಿಷ್ಟ ವರ್ಗದ (ಎಸ್.ಸಿ.) ಮತ್ತು ಪರಿಶಷ್ಟ ಪಂಗಡದ (ಎಸ್.ಟಿ) ಪುರುಷ ಮತ್ತು ಮಹಿಳೆಯರಿಗಾಗಿ 10 ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಕಾರ್ಯಕ್ರಮವನ್ನು ನಗರದಲ್ಲಿ ಅಕ್ಟೋಬರ್ ಎರಡನೇ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತದೆ.

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸ್ವಂತ ಉದ್ಯೋಗ ಸ್ಥಾಪಿಸಲು ಸರ್ಕಾರದ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.

ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9353438881 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.