ಉಪನ್ಯಾಸ ನೀಡುತ್ತಿರುವ ವೇಳೆ ಹೃದಯಾಘಾತ- ಕುಸಿದು ಬಿದ್ದು ಪ್ರಾಧ್ಯಾಪಕ ಸಾವು
ಕಾನ್ಪುರ :ವೇದಿಕೆ ಮೇಲೆ ಉಪನ್ಯಾಸ ನೀಡುತ್ತಿರುವ ವೇಳೆ ಹೃದಯಾಘಾತ ಐಐಟಿ ಕಾ ನ್ಪುರದ ಹಿರಿಯ ಉಪನ್ಯಾಸಕರೊಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದ ಸಮೀರ್ ಖಂಡೇಕರ್ (53) ಮೃತ ಪ್ರಾಧ್ಯಾಪಕರು.ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ಭಾಗವಹಿಸಿದ್ದ ಸಮೀರ್ ಖಂಡೇಕರ್ ಅವರು ವೇದಿಕೆಯಲ್ಲಿ ಉಪನ್ಯಾಸ ನೀಡುತ್ತಿದ್ದರು ಈವೇಳೆ ಎದೆನೋವು ಕಾಣಿಸಿಕೊಂಡು ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ . ತಕ್ಷಣ ಆಸ್ಪತ್ರೆಗೆಕರೆದೊಯ್ಯಲಾಯಿತು ಆದ್ರೆ ಮಾರ್ಗ ಮಧ್ಯೆ ಪ್ರಾಣಬಿಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಸುಮಾರು ಐದು ವರ್ಷಗಳ ಹಿಂದೆ ಖಾಂಡೇಕರ್ ಅವರಿಗೆ ಅರೋಗ್ಯ ಸಮಸ್ಯೆ ಎದುರಾದಾಗ ಪರೀಕ್ಷೆ ನಡೆಸಿದ ವೈದ್ಯರು ರಕ್ತದಲ್ಲಿಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿರುವುದಾಗಿ ಹೇಳಿದ್ದರು ಎಂದು ಅವರ ಆಪ್ತ ಪ್ರಾಧ್ಯಾಪಕರು ತಿಳಿಸಿದ್ದಾರೆ.