Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಉಪ್ಪಾರ ಅಭಿವೃದ್ಧಿ ನಿಗಮದಿಂದ ; ಅರ್ಜಿ ಆಹ್ವಾನ

 

ಹೊಸಪೇಟೆ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ವ್ಯವಸ್ಥಾಪಕ ಕೆ. ಭೀಮಪ್ಪ ಅವರು ತಿಳಿಸಿದ್ದಾರೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಸೌಲಭ್ಯ ಪಡೆಯಲು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಅರ್ಜಿ ಸಲ್ಲಿಸಬೇಕು, ಸೇವಾಸಿಂಧು ಪೋರ್ಟಲ್ ಮೂಲಕ ನ.3ರೊಳಗೆ ಅರ್ಜಿ ಸಲ್ಲಿಸಬೇಕು, ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ  http:upparadevelopment.karnataka.gov.in ಅಥವಾ ಕೇಂದ್ರ ಕಚೇರಿಯ ದೂ.080-22252555 ಅಥವಾ ಹೊಸಪೇಟೆ ತಾಲ್ಲೂಕು ಕಚೇರಿಯ ಮೊದಲನೇ ಮಹಡಿ ಕೊಠಡಿ ಸಂಖ್ಯೆ 4ರಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಬಹುದು. ದೂ.08392-267038.