Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಉಳ್ಳಾಲ: ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು..!

ಉಳ್ಳಾಲ: ಆಂಬ್ಯುಲೆನ್ಸ್ ವಾಹನ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ಉಳ್ಳಾಲ ತಲಪಾಡಿ ಮರೋಳಿ ಬಾರ್ ಎದುರುಗಡೆ ಭಾನುವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ ಫ್ರಾನ್ಸಿಸ್ ಡಿಸೋಜ (62) ಮೃತರು. ಮನೆಯಿಂದ ತಲಪಾಡಿಗೆ ಬಂದಿದ್ದ ಫ್ರಾನ್ಸಿಸ್, ಮರೋಳಿ ಬಾರ್ ಎದುರುಗಡೆಯಿಂದ ವಾಪಸ್ಸು ಮನೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ಸಂದರ್ಭ ಕೇರಳದಿಂದ ಮಂಗಳೂರು ಕಡೆಗೆ ಅಮಿತ ವೇಗದಲ್ಲಿ ಬರುತ್ತಿದ್ದ ಖಾಲಿ ಆಂಬ್ಯುಲೆನ್ಸ್ ಫ್ರಾನ್ಸಿಸ್ ಅವರಿಗೆ ಢಿಕ್ಕಿ ಹೊಡೆದಿದೆ.

ಇಂದು ರಾಜ್ಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ

ಢಿಕ್ಕಿಯ ರಭಸಕ್ಕೆ ಫ್ರಾನ್ಸಿಸ್ ದೂರ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತಕ್ಷಣ ಆಂಬ್ಯುಲೆನ್ಸ್ ಚಾಲಕ ಅದೇ ಆಂಬ್ಯುಲೆನ್ಸ್ ಮೂಲಕ ಫ್ರಾನ್ಸಿಸ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತಂದರೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇಹಲೋಕ ತ್ಯಜಿಸಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.