Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಉಳ್ಳಾಲ: ಕಾಲ್ ಸೆಂಟರ್ ಉದ್ಯೋಗಿ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಉಳ್ಳಾಲ: ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ.

ಪ್ರೀತಿಕಾ ಪೂಜಾರಿ(21)ಆತ್ಮ ಹತ್ಯೆಗೈದ ಯುವತಿ.

ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು. ಇನ್ನು ಇಂದು ಮದ್ಯಾಹ್ನ 12.30 ರ ವೇಳೆಗೆ ಪ್ರೀತಿಕಾ ಮನೆಯೊಳಗೆ ಆತ್ಮಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ .ಮದ್ಯಾಹ್ನ ಕೆಲಸದಿಂದ ಮರಳಿದ್ದ ಪ್ರೀತಿಕಾ ನೇಣಿಗೆ ಕೊರಳೊಡ್ಡಿದ್ದಾರೆ.

ಮಂಗಳೂರು: ನಾಳೆಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕೊಣಾಜೆ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದು ಪ್ರಕರಣ ದಾಖಲಿಸಿದ್ದಾರೆ.

ಮೃತ ಪ್ರೀತಿಕ ಯುವಕನೊಬ್ಬನನ್ನ ಪ್ರೀತಿಸುತ್ತಿದ್ದು ಆತ ಪ್ರೇಮ ನಿರಾಕರಣೆ ಮಾಡಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.