Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಎಎಪಿ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು, ಸಂಘಟನಾ ಕಾರ್ಯದರ್ಶಿಯಾಗಿ ಸಂದೀಪ್ ಪಾಠಕ್ ನೇಮಕ

ಎಎಪಿ ರಾಜ್ಯಾಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಚಂದ್ರು, ಪಕ್ಷದ ಸಂಘಟನಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ್ ಪಾಠಕ್ ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಅಮ್ ಆದ್ಮಿ ಪಕ್ಷ ಮಾಹಿತಿ ನೀಡಿದ್ದು, ರಾಜ್ಯದ ಹೆಸರಾಂತ ರಂಗಭೂಮಿ – ಚಲನಚಿತ್ರ ಕಲಾವಿದ, ಮಾಜಿ ಶಾಸಕರು ಹಾಗೂ ಹಿರಿಯ ರಾಜಕಾರಣಿಗಳಾದ ಮುಖ್ಯಮಂತ್ರಿ ಚಂದ್ರು ರವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರೊಂದಿಗೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ರವರುಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದೆ.