Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಅನುಷ್ಕಾಶರ್ಮಾ ಹಾಗೂ ವಿರಾಟ್‌ ಕೊಹ್ಲಿ ದಂಪತಿ!

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಂಪತಿಗಳು ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿ ಆಗಿದೆ.

ಸದ್ಯ ಅನುಷ್ಕಾ ಶರ್ಮಾ ಗರ್ಭೀಣಿಯಾಗಿರುವ ಹಿನ್ನಲೆ ಅವರು ಕೆಲವು ದಿನಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಜೊತೆಗೆ ವಿರಾಟ್ ಕೊಹ್ಲಿ ಅವರೊಂದಿಗೆ ಎಲ್ಲಿಗೂ ಪ್ರಯಾಣಿಸುತ್ತಿಲ್ಲ ಹಾಗೂ ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುತ್ತಿಲ್ಲ ಎಂದು ವರದಿಯಾಗಿದೆ.

ಕೆಲವು ಮೂಲಗಳ ಪ್ರಕಾರ, ಅನುಷ್ಕಾ ತನ್ನ ಎರಡನೇ ಮಗುವಿನ ನಿರೀಕ್ಷಿಯಲ್ಲಿದ್ದಾರೆ. ಕಳೆದ ಬಾರಿಯಂತೆ, ಅವರು ಮುಂದಿನ ದಿನಗಳಲ್ಲಿ ಈ ಸಿಹಿ ವಿಚಾರವನ್ನು ಸಾರ್ವಜನಿಕವಾಗಿ ಹಂಚಿಕೊಳಲ್ಲಿದ್ದಾರೆ. ಹೀಗಾಗಿಯೇ ಅನುಷ್ಕಾ ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಅಥವಾ ಮುಂಬೈನಲ್ಲಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಅಲ್ಲದೆ ಊಹಾಪೋಹಗಳಿಗೆ ಉತ್ತರ ನೀಡುವ ಸಲುವಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂದು ವರದಿಯಾಗಿದೆ.

ಅನುಷ್ಕಾ ಮತ್ತು ವಿರಾಟ್ ಇತ್ತೀಚೆಗೆ ಮುಂಬೈನ ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಫೋಟೋಗಳನ್ನು ಎಲ್ಲಿಯೂ ಪ್ರಕಟಿಸದಂತೆ ಪಾಪರಾಜಿಗಳಿಗೆ ವಿನಂತಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಈ ವಿಚಾರವನ್ನು ಬಹಿರಂಗಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.