Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಏಕದಿನ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು – ಪ್ರಧಾನಿ ಮೋದಿ ಅಭಿನಂದನೆ

ಅಹ್ಮದಾಬಾದ್‌: ನರೇಂದ್ರ ಮೋದಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023ರ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 7 ವಿಕೆಟ್ ಗಳ ಭಾರೀ ಜಯಗಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ರೋಹಿತ್ ಶರ್ಮ ನೇತೃತ್ವದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಟೀಮ್ ಇಂಡಿಯಾ ಎಲ್ಲಾ ರೀತಿಯಲ್ಲಿ!,ಅಹಮದಾಬಾದ್‌ನಲ್ಲಿ ಇಂದು ಅಮೋಘ ಗೆಲುವು, ಆಲ್‌ರೌಂಡ್‌ ಶ್ರೇಷ್ಠತೆ.ತಂಡಕ್ಕೆ ಅಭಿನಂದನೆಗಳು ಮತ್ತು ಮುಂದಿನ ಪಂದ್ಯಗಳಿಗೆ ಶುಭಾಶಯಗಳು ಎಂದಿದ್ದಾರೆ.

ಇನ್ನು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗೃಹ ಸಚಿವ ಅಮಿತ್ ಶಾ ಕೂಡ ಹಾಜರಿದ್ದು ಪಂದ್ಯ ವೀಕ್ಷಿಸಿದರು.