Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಏಳು ಬಾರಿ ಗುಂಡು ಹಾರಿಸಿ ಸಿಪಿಐ(ಎಂ) ಮುಖಂಡನಿಗೆ ಗುಂಡಿಕ್ಕಿ ಹತ್ಯೆ.!

ರಾಂಚಿ: ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿರುವ ತಮ್ಮ ಕಚೇರಿಯಲ್ಲಿ ಬುಧವಾರ ಕುಳಿತಿದ್ದ ಸ್ಥಳೀಯ ಸಿಪಿಐ(ಎಂ) ಮುಖಂಡ ಸುಭಾಷ್ ಮುಂಡಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ರಾಂಚಿಯ ದಲದಾಲಿ ಚೌಕ್‌ನಲ್ಲಿರುವ ಸುಭಾಷ್ ಮುಂಡಾ ಅವರ ಕಚೇರಿಯಲ್ಲಿ ರಾತ್ರಿ 7 ರಿಂದ 8 ಗಂಟೆಯ ನಡುವೆ ಈ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ಏಳು ಬಾರಿ ಗುಂಡುಗಳನ್ನು ಹಾರಿಸಿದ್ದಾರೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪ್ರಕಾಶ್ ವಿಪ್ಲವ್ ಹೇಳಿದ್ದಾರೆ. ಮುಂಡಾ ಅವರು ಹಟಿಯಾ ಕ್ಷೇತ್ರದಿಂದ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹಾಗೂ ಮಂದರ್ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಘಟನೆಯ ನಂತರ, ಕ್ರೋಧಗೊಂಡ ಸ್ಥಳೀಯರು ಸ್ಥಳದಲ್ಲಿದ್ದ ಅಂಗಡಿಗಳನ್ನು ಧ್ವಂಸಗೊಳಿಸಿ, ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.