Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಕ್ರಾಪರ್ ಪರಮಾಣು ವಿದ್ಯುತ್ ಸ್ಥಾವರ ಕಾರ್ಯಾಚರಣೆ ಆರಂಭ

ಗುಜರಾತ್: ಭಾರತದ ಗುಜರಾತ್ ಕಕ್ರಾಪರ್ ಪರಮಾಣು ವಿದ್ಯುತ್ ಸ್ಥಾವರ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಆರಂಭಿಸಿದೆ . ಇಲ್ಲಿ ಈಗಾಗಲೇ ಎರಡು ಸ್ಥಾವರಗಳು 220 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯನ್ನು ಸಾಮರ್ಥ್ಯ ಹೊಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಕಕ್ರಾಪರ್ ವಿದ್ಯುತ್ ಸ್ಥಾವರವನ್ನು ಪ್ರಾರಂಭಿಸಿದ್ದಕ್ಕಾಗಿ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ‘ಭಾರತ ಮತ್ತೊಂದು ಸಾಧನೆ ಮಾಡಿದೆ. 700 MW ಸಾಮರ್ಥ್ಯದ ಗುಜರಾತ್‌ನ ಮೊದಲ ಅತಿದೊಡ್ಡ ಸ್ಥಳೀಯ ಕಕ್ರಾಪರ್ ಪರಮಾಣು ವಿದ್ಯುತ್ ಸ್ಥಾವರದ ಘಟಕ-3 ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿದೆ. ನಮ್ಮ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಅಭಿನಂದನೆಗಳು; ಎಂದು ಎಚ್ಚಿಗೆ ಸೂಚಿಸಿದ್ದಾರೆ.