Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕರಾವಳಿ ಸೇರಿದಂತೆ ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಮಳೆ

ಬೆಂಗಳೂರು: ರಾಜ್ಯದ್ಯಂತ ಮುಂಗಾರು ಚುರುಕುಪಡೆಯುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಆಫ್ರಿಕಾದಲ್ಲಿ ವಿಷಾನಿಲ ಸೋರಿಕೆ; ಮಕ್ಕಳು ಸೇರಿ 16 ಮಂದಿ ಸಾವು

ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾರವಾರ, ಹೊನ್ನಾವರ, ಶಿರಾಲಿ, ಮುಲ್ಕಿ, ಬೆಳ್ತಂಗಡಿ, ಕಾರ್ಕಳ, ಕೊಲ್ಲೂರು, ಗೇರುಸೊಪ್ಪ, ಕುಮಟಾ, ಮಂಗಳೂರು, ಮಾಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಮಳೆಯಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡದಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 45-55 ಕಿ.ಮೀ ಇಂದ 65 ಕಿ.ಮೀ ವರೆಗೂ ಬೀಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಒಂದೆರಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.