Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ, ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ’ – ಯತ್ನಾಳ್

ಹಾವೇರಿ: ಕರ್ನಾಟಕದಲ್ಲೂ ಉತ್ತರ ಪ್ರದೇಶ ಮಾದರಿಯಲ್ಲಿ ಒಂದು ದಿನ ಜೆಸಿಬಿ ಬರುತ್ತದೆ. ಒಂದಲ್ಲಾ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಜೆಸಿಬಿ ಬಂದೇ ಬರುತ್ತದೆ. ನನಗೆ ಎರಡೇ ತಿಂಗಳು ಗೃಹ ಸಚಿವ ಮಾಡಿ ನೋಡಿ. ಉತ್ತರ ಪ್ರದೇಶದ ಬಗ್ಗೆ ಗೊತ್ತಲ್ಲ ಆ ರೀತಿ ಕರ್ನಾಟಕ ಮಾಡುತ್ತೇನೆ ಎಂದರು.

ಇನ್ನು ಪೊಲೀಸರ ಕೈಯಲ್ಲಿ ಗನ್ ಕೊಡುತ್ತಾರೆ. ಆದರೆ ಅದನ್ನು ಬಳಸುವಂತಿಲ್ಲ ಅಂತೆ. ಹಾಗಾದರೆ ಪೊಲೀಸರ ಕೈಗೆ ಗನ್ ಕೊಡುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ.