‘ಕರ್ನಾಟಕದಿಂದ 35 ಸಾವಿರಕ್ಕೂ ಹೆಚ್ಚು ರಾಮ ಭಕ್ತರು ಅಯೋಧ್ಯೆಗೆ ತೆರಳಲಿದ್ದಾರೆ’ – ಬಿವೈ ವಿಜಯೇಂದ್ರ
ಬೆಂಗಳೂರು: ಜನವರಿ 22ರ ಬಳಿಕ 60 ದಿನಗಳ ಅವಧಿಯಲ್ಲಿ ಕರ್ನಾಟಕದಿಂದ ಅಯೋಧ್ಯೆಗೆ 35 ಸಾವಿರಕ್ಕೂ ಹೆಚ್ಚು ರಾಮ ಭಕ್ತರು ಪ್ರಯಾಣಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜನವರಿ 31ರಿಂದ ಮಾರ್ಚ್ 25ರ ವರೆಗೆ ರಾಮ ಭಕ್ತರು ಅಯೋಧ್ಯೆಗೆ ಪ್ರಯಾಣ ಮಾಡಲಿದ್ದು, ಪ್ರಯಾಣದ ಖರ್ಚು ವೆಚ್ಚವನ್ನು ಅವರೇ ಭರಿಸಲಿದ್ದಾರೆ. ಒಟ್ಟು 25 ರೈಲುಗಳ ಮೂಲಕ ಪ್ರಯಾಣ ಮಾಡಲಿದ್ದಾರೆ ಎಂದರು.
ಇನ್ನು ರಾಮ ಭಕ್ತರ ಉತ್ಸಾಹಕ್ಕೆ ಅಡ್ಡಿಯಾಗದಂತೆ ರಾಜ್ಯ ಸರ್ಕಾರ ಕೂಡಾ ಸಹಕಾರ ಕೊಡಬೇಕು. ಈಗಾಗಲೇ ಹಲವು ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಕೂಡ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಹಾಗಾಗಿ ರಾಜ್ಯದಲ್ಲೂ ರಜೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.