ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ದಾವಣಗೆರೆ;: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು(ಡಿ.ಎಸ್.ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಪಿ.ಹೆಚ್.ಡಿ ಸಂಶೋಧಗೆ ಕರ್ನಾಟಕ ಡಿ.ಎಸ್.ಟಿ.-ಪಿ.ಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ.
ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಸಂಸ್ಥೆ ಹಾಗೂ ಕಾಲೇಜುಗಳಲ್ಲಿ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗಿರಬೇಕು.
ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೊಬರ್ 30 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರಾದ ಬಸವರಾಜ ತಿಳಿಸಿದ್ದಾರೆ.