Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಯೋಗಕ್ಷೇಮ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಲೋಕಸಭಾ ಸಭಾಂಗಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರ ಯೋಗಕ್ಷೇಮ ವಿಚಾರಿಸಿದರು. ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ದೆಹಲಿಗೆ ಆಗಮಿಸುತ್ತಿದ್ದ ಸೋನಿಯಾಗಾಂಧಿ ಹಾಗೂ ರಾಹುಲ್‍ಗಾಂಧಿ ಇದ್ದ ವಿಮಾನ ಭೂಪಾಲ್‍ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಹಿನ್ನೆಲೆಯಲ್ಲಿ ಗುರುವಾರ ಮೋದಿ ಅವರು ಸೋನಿಯಾ ಗಾಂಧಿ ಅವರೊಂದಿಗೆ ಸಂಕ್ಷಿಪ್ತ ಸಂವಾದ ನಡೆಸಿ ಯೋಗಕ್ಷೇಮ ವಿಚಾರಿಸಿದರು.

ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗುವ ಮುನ್ನ ಪ್ರಧಾನಿ ಮೋದಿ ಮತ್ತು ಸೋನಿಯಾ ಅವರೊಂದಿಗೆ ಸಂಕ್ಷಿಪ್ತ ಸಂವಾದ ನಡೆಸಿದ್ದು ಮಾತ್ರವಲ್ಲದೆ, ಸಂಸತ್ ಅಧಿವೇಶನದ ಮೊದಲ ದಿನ ವಾಡಿಕೆಯಂತೆ ಸದನದ ಸಭೆಗೂ ಮುನ್ನ ಪ್ರಧಾನಿ ಮೋದಿ ತಮ್ಮ ರಾಜಕೀಯ ಪ್ರತಿಸ್ಪರ್ಧಿಗಳೊಂದಿಗೆ ಕೆಲ ಕಾಲ ಕಳೆದ ಗಮನ ಸೆಳೆದರು.