ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಮನೆ, ಕಚೇರಿ ಸೇರಿ 13 ಕಡೆ ಇಡಿ ದಾಳಿ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಮನೆ, ಕಚೇರಿ ಸೇರಿದಂತೆ ಒಟ್ಟು 13 ಕಡೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ.
ಅಧಿಕಾರಿಗಳು ಏಕ ಕಾಲಕ್ಕೆ ಮನೆ ಹಾಗೂ ಕಚೇರಿಯ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಶಾಸಕರ ತಂದೆ ಸೂರ್ಯ ನಾರಾಯಣ ರೆಡ್ಡಿ, ಶಾಸಕರ ಚಿಕ್ಕಪ್ಪ ಪ್ರತಾಪ್ ರೆಡ್ಡಿ, ಸಂಬಂಧಿ ಸತೀಶ್ ರೆಡ್ಡಿ ಅವರ ಮನೆ ಕಚೇರಿ ಮೇಲೆ ದಾಳಿ ನಡೆಸಿದೆ.
ಭರತ್ ರೆಡ್ಡಿ ಕುಟುಂಬ ಗ್ರಾನೈಟ್ ಬಿಸಿನೆಸ್ ಹೊಂದಿದ್ದು ಬಳ್ಳಾರಿ, ಬೆಂಗಳೂರು, ಚೆನ್ನೈ ಸೇರಿದಂತೆ ಒಟ್ಟು 13 ಕಡೆಯಲ್ಲಿ ದಾಳಿ ನಡೆಸಿ ತನಿಖೆ ನಡೆಸುತ್ತಿದೆ ಎಂದು ವರದಿಯಾಗಿದೆ.