Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾಡಾನೆ ದಾಳಿಗೆ ವ್ಯಕ್ತಿ ಬಲಿ.

ಚಿಕ್ಕಮಗಳೂರು: ಚಿಕ್ಕಮಗಳೂರಿನ ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಕಾಡಾನೆ ಕಾಲ್ತುಳಿತಕ್ಕೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ. 3 ಭಾನುವಾರ ನಡೆದಿದೆ.

ದುರ್ಗಾ ಕಿನ್ನಿ (60) ಕಾಡಾನೆ ಕಾಲ್ತುಳಿತಕ್ಕೆ ಮೃತಪಟ್ಟ ವ್ಯಕ್ತಿ.

ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುವಾಗ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಆಲ್ದೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನು ಸ್ಥಳಕ್ಕೆ ಹಿರಿಯ ಅರಣ್ಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅರಣ್ಯ ಅಧಿಕಾರಿಗಳು ಸ್ಥಳದಲ್ಲಿ ಪಟಾಕಿ ಸಿಡಿಸುತ್ತಿದ್ದಾರೆ. ಸ್ಥಳಿಯರು ಸ್ಥಳಕ್ಕೆ ಭೇಟಿ ನೀಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.