ಕಾರು ಅಪಘಾತ: ಕೈ ನಾಯಕಿ ವೀಣಾ ಕಾಶಪ್ಪನವರ್ ಆಸ್ಪತ್ರೆಗೆ ದಾಖಲು
ಕಲಬುರ್ಗಿ: ಹುನಗುಂದ ಶಾಸಕ ವಿಜಯಯಾನಂದ ಕಾಶಪ್ಪನವರ ಪತ್ನಿ, ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಪರಿಣಾಮ ಗಾಯಗೊಂಡ ಅವರನ್ನು ಚಿಕಿತ್ಸೆಗೆ ಅವರನ್ನು ಇದೀಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಘಟನೆ ನಡೆದಿದ್ದು, ವೀಣಾ ಕಾಶಪ್ಪನವರ ಅವರ ಕೈ ಮತ್ತು ಎದೆ ಭಾಗಕ್ಕೆ ಪೆಟ್ಟು ಬಿದ್ದಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.
ವಿಜಯಪುರದಿಂದ ಸಿಂದಗಿಯತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವೀಣಾ ಕಾಶಪ್ಪನವರ ಕಾರಿಗೆ ಎದುರಾಗಿ ಬಂದ ಸ್ಕೂಟಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ವೇಳೆ ಅದೇ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಸದ್ಯ ಈ ಪ್ರಕರಣ ವಿಜಯಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.